Posts

ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ : ಯಡಿಯೂರಪ್ಪ

Image
ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಪುನರ್ ರಚನೆಯಾಗಿದ್ದು ಹೊಸ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿ.ಎಸ್.ಯಡಿಯೂರಪ್ಪಗೆ ಸ್ಥಾನ ಲಭಿಸಿದೆ. ಬಿಜೆಪಿಯಲ್ಲಿ ನೀತಿ ತೀರ್ಮಾನ ಕೈಗೊಳ್ಳುವ ಉನ್ನತ ಸಮಿತಿಯೇ ಬಿಜೆಪಿ ಸಂಸದೀಯ ಮಂಡಳಿ. ಈ ಸಮಿತಿಯಿಂದ ನಿತಿನ್ ಗಡ್ಕರಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೈಬಿಡಲಾಗಿದೆ. ಯಡಿಯೂರಪ್ಪ ಮತ್ತು ಸರ್ಬಾನಂದ ಸೋನೋವಾಲ್ ಅವರಿಗೆ ಸ್ಥಾನ ನೀಡಲಾಗಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಪಟ್ಟಿ ಬಿಡುಗಡೆಯಾಗಿದ್ದುಇದರಲ್ಲಿಯೂ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ. ಕೇಂದ್ರೀಯ ಚುನಾವಣಾ ಸಮಿತಿಯ ಇತರ ಸದಸ್ಯರೆಂದರೆ ಜೆಪಿ ನಡ್ಡಾ, ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್​ಪುರ, ಸುಧಾ ಯಾದವ್, ಸತ್ಯ ನಾರಾಯಣ್ ಜಟಿಯಾ, ಓಂ ಮಾಥುರ್, ಭುಪೇಂದ್ರ ಯಾದವ್, ದೇವೇಂದ್ರ ಫಡ್ನವಿಸ್, ಸರ್ಬಾನಂದ ಸೋನೋವಾಲ್ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್. ಈ ಹಿಂದೆ ಕರ್ನಾಟಕದ ಅನಂತ ಕುಮಾರ್ ಸಂಸದೀಯ ಮಂಡಳಿಯ ಸದಸ್ಯರಾಗಿದ್ದರು.